ವಿಜಯಪುರ: ಇತ್ತೀಚಿಗೆ ಈ ಹೃದಯಾಘಾತ ಎನ್ನುವುದು ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ, ವಯೋ ವೃದ್ಧರು ಸಹ ಈ ಒಂದು ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಡಾನ್ಸ್ ಮಾಡುವಾಗಲೇ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
Advertisement
ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಮೃತ ದುರ್ಧೈವಿಯಾಗಿದ್ದು, ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾನೆ.
ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.