ವಿಜಯಪುರ:- ವಿಜಯಪುರ ಡಿಡಿಪಿಐ ಎನ್. ಎಚ್ ನಾಗೂರ ಅವರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.
Advertisement
ಕರ್ತವ್ಯಲೋಪ ಹಿನ್ನೆಲೆ ಅಮಾನತು ಮಾಡಲಾಗಿದೆ. ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೋಂದಣಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಅನುಮೋದನೆ ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಡಿಡಿಪಿಐ ನಾಗೂರ ವಿರುದ್ಧ ಶಿಸ್ತು ಕ್ರಮ ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ನಾಗೂರ ಅವರನ್ನು ಸಸ್ಪೆಂಡ್ ಮಾಡಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.
ಡಿಡಿಪಿಐ ಎನ್. ಎಚ್ ನಾಗೂರ ಅವರು ಇದು ಮೂರನೇ ಬಾರಿಗೆ ಅಮಾನತ್ತಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.