ವಿಜಯಪುರ:- ಕರ್ನಾಟಕದಲ್ಲಿ ಇತ್ತೀಚೆಗೆ ಮಳೆಯ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿ ಆಗಿದೆ. ಅದರಂತೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೊಳೂರ ಗ್ರಾಮದಲ್ಲಿ ಸಿಡಿಲು ಬಡಿದು ವೃದ್ದ ಹಾಗೂ ಎಮ್ಮೆ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಬಸನಗೌಡ ಬಿರಾದಾರ್ ಸ್ಥಳದಲ್ಲೇ ಸಾವನ್ನಪ್ಪಿದ ವೃದ್ಧ. ತೋಟದ ಮನೆಯ ಗಿಡಗ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ಜರುಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.