ವಿಜಯಪುರ:-ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಜರುಗಿದೆ.
Advertisement
ರಸ್ತೆ ಬದಿ ನಿಂತಿದ್ದವರ ಮೇಲೆ ಬೈಕ್ ಹರಿದ ಹಿನ್ನೆಲೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಬೈಕ್ ಸವಾರ 22 ವರ್ಷದ ನಿಂಗರಾಜ ಚೌಧರಿ, 23 ವರ್ಷದ ಅನೀಲ ಖೈನೂರ, 19 ವರ್ಷದ ಉದಯಕುಮಾರ ಪ್ಯಾಟಿ ಮೃತದುರ್ದೈವಿಗಳು. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.