ಅಯ್ಯನಗೌಡ ಗೌಡಪ್ಪಗೌಡ……ಜಮೀನಿನಲ್ಲಿ ಗಾಂಜಾ ಬೆಳೆದಿದ್ದ…..
ವಿಜಯಸಾಕ್ಷಿ ಸುದ್ದಿ, ಗದಗ
ತನ್ನ ಸ್ವಂತ ಲಾಭಕ್ಕೋಸ್ಕರ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಗದಗ ತಾಲೂಕಿನ ಬೆಳಹೋಡದಿಂದ ಮದಗಾನೂರು ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ಸರ್ವೆ ನಂ. 111/1+2ಅ/2 ರಲ್ಲಿ ಒಟ್ಟು 10 ಹಸಿ ಗಾಂಜಾ ಗಿಡಗಳನ್ನು ಬೆಳೆಸಲಾಗಿತ್ತು.
22.10.2021 ರಂದು ಆರೋಪಿತ ಅಯ್ಯನಗೌಡ ರಾಮನಗೌಡ ಗೌಡಪ್ಪಗೌಡರ ಸಿಕ್ಕಿಬಿದ್ದಿದ್ದು, ಇವನಿಂದ ಸುಮಾರು 12 ಕೆಜಿ ಗಾಂಜಾವನ್ನು ವಶಕ್ಕೆ ಪಡೆದು, ಆರೋಪಿಯ ವಿರುದ್ಧ ಗದಗ ವಲಯದ ಅಬಕಾರಿ ನಿರೀಕ್ಷಕ ನಾರಾಯಣಸಾ ಪವಾರ ಅವರು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸಾಕ್ಷಿ ವಿಚಾರಣೆ ನಡೆಸಿದ ಗದುಗಿನ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಎಸ್ ಶೆಟ್ಟಿ ಇವರು ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಅಯ್ಯನಗೌಡ ರಾಮನಗೌಡ ಗೌಡಪ್ಪಗೌಡನಿಗೆ ದಿ.16.09.2023 ರಂದು ಶಿಕ್ಷೆ ವಿಧಿಸಿದ್ದಾರೆ.
ಎನ್‌ಡಿಪಿಎಸ್ ಕಾಯ್ದೆಯ ಕಲಂ 20(I) 20(ಎ) 25, 8 (ಸಿ) ಅಡಿಯಲ್ಲಿ 3 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ಬಸವನಗೌಡ ದೊಡ್ಡಗೌಡ್ರ ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.