ವಿಜಯಸಾಕ್ಷಿ ಸುದ್ದಿ, ಗದಗ:
Advertisement
ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಗುತ್ತಿಗೆದಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಜೆಸಿಬಿ ಆಪರೇಟರ್ ಆಸ್ಪತ್ರೆಯಲ್ಲಿ ಮೃತಪಟ್ಟ ಗದಗ ತಾಲ್ಲೂಕಿನ ಹರ್ಲಾಪುರ ಕ್ರಾಸ್ ಬಳಿ ನಡೆದಿದೆ.
ಘಟನೆಯಲ್ಲಿ ಗದಗ ತಾಲ್ಲೂಕಿನ ಶ್ಯಾಗೋಟಿ ಗ್ರಾಮದ ಗುತ್ತಿಗೆದಾರ ಯಲ್ಲಪ್ಪಗೌಡ ಬಸನಗೌಡ ವೆಂಕನಗೌಡ (50) ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜೆಸಿಬಿ ಆಪರೇಟರ್ ಲೋಕೇಶ್ ಗುಡಿಗೇರಿ (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.