ನಂಬರ್ ಪ್ಲೇಟ್ ಇಲ್ಲದ ವಾಹನಗಳೇ ಅಕ್ಕಿ ದಂಧೆಕೋರರ ಸೀಕ್ರೆಟ್…….
ವಿಜಯಸಾಕ್ಷಿ ಸುದ್ದಿ, ಬೆಟಗೇರಿ
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬೇರೆ ಬೇರೆ ಸಾರ್ವಜನಿಕರಿಂದ ಸಂಗ್ರಹಿಸಿ, ಲಾಭದ ಉದ್ದೇಶದಿಂದ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲೆಂದು ಸಾಗಿಸುತ್ತಿರುವಾಗ ದಾಳಿ ನಡೆಸಿದ ಆಹಾರ ನಿರೀಕ್ಷಕರು, ವಾಹನದ ಸಮೇತ 27.85 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 23ರ ಮುಂಜಾನೆ 1 ಗಂಟೆಯ ಸುಮಾರಿಗೆ ಬೆಟಗೇರಿ ಬಸ್ ನಿಲ್ದಾಣದ ಹತ್ತಿರ, ಸಾರ್ವಜನಿಕರಿಗೆ ವಿತರಿಸುವ ಅಕ್ಕಿಯನ್ನು ಅಕ್ರಮವಾಗಿ ಸಾರ್ವಜನಿಕರಿಂದ ಖರೀದಿಸಿ ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸಿ, 62 ಚೀಲಗಳಲ್ಲಿ ತುಂಬಿಸಿದ್ದ ಒಟ್ಟೂ 61,270 ರೂ ಬೆಲೆಯ 27 ಕ್ವಿಂಟಲ್ 85 ಕೆಜಿ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದಾಗ ಗೂಡ್ಸ್ ವಾಹನ ಸಿಕ್ಕಿದೆ.

ನಂಬರ್ ಪ್ಲೇಟ್ ಇಲ್ಲದ ಅಶೋಕ್ ಲೈಲಾಂಡ್ ಗೂಡ್ಸ್ ವಾಹನದೊಂದಿಗೆ ವಾಹನದ ಚಾಲಕ ಹಾಗೂ ಮಾಲಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಸರ್ಕಾರದ ಪರವಾಗಿ ದೂರು ದಾಖಲಿಸಲಾಗಿದೆ.

ಅನ್ನ ಭಾಗ್ಯ ಅಕ್ರಮ ಅಕ್ಕಿ ಸಾಗಾಟ ಮಾಡುವ ದಂಧೆಕೋರರು ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಬಳಿಸಿಕೊಂಡು ತಮ್ಮ ದಂಧೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.