ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮಠದ ಆವರಣದಲ್ಲಿ ಪ್ರಚಾರ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು

0
Spread the love

ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ…….

Advertisement

ವಿಜಯಸಾಕ್ಷಿ ಸುದ್ದಿ, ಗದಗ

ದೇವಸ್ಥಾನಗಳಲ್ಲಿ ಚುನಾವಣೆಗೆ ಸಂಬಂಧಿಸಿ ಯಾವುದೇ ಚಟುವಟಿಕೆಗಳನ್ನು ನಡೆಸಬಾರದೆಂದ ಕಾನೂನಿದ್ದರೂ ಮಠವೊಂದರ ಒಳಾವರಣದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದು ಅಭ್ಯರ್ಥಿಯ ಪರ ಘೋಷಣೆ ಕೂಗಿದ ಆರೋಪದಡಿ ಚಂದ್ರು ಲಮಾಣಿ ವಿರುದ್ಧ ಪ್ರಕರಣ ದಾಖಲಾಗಿದೆ.

ಏ.20ರಂದು ಮಧ್ಯಾಹ್ನ 11.50ರಿಂದ 1 ಗಂಟೆಯ ನಡುವಿನ ಅವಧಿಯಲ್ಲಿ ಶಿರಹಟ್ಟಿ ಫಕ್ಕೀರೇಶ್ವರ ಮಠದ ಒಳಗಿನ ಆವರಣದಲ್ಲಿ ಚಂದ್ರು ಲಮಾಣಿ ಹಾಗೂ ಅವರ ಬೆಂಬಲಿಗರು ಕೂಡಿಕೊಂಡು ಬಿಜೆಪಿ ಪಕ್ಷದ ಧ್ವಜಗಳನ್ನು ಹಿಡಿದು ಪಕ್ಷದ ಪರವಾಗಿ ಘೋಷಣೆ ಕೂಗಿ, ಪ್ರಚಾರ ನಡೆಸಿದ್ದರು.

ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, Religious Institution(Prevention of Misuse) Act-1988ರ ಕಲಂ 7ರ ಅಡಿ ಕ್ರಮ ಜರುಗಿಸುವಂತೆ ಶಿರಹಟ್ಟಿ ಸರ್ಕಲ್‌ನ ಫ್ಲೈಯಿಂಗ್‌ ಸ್ಕ್ವಾಡ್‌ ಸಿದ್ದರಾಯ ಕಟ್ಟಿಮನಿ ಸರಕಾರದ ಪರವಾಗಿ ದೂರು ನೀಡಿದ್ದರು.
ಪ್ರಸ್ತುತ ದೂರು ಸ್ವೀಕರಿಸಿರುವ ಶಿರಹಟ್ಟಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here