ಖಾಸಗಿ ಹೊಟೇಲ್ ಮೇಲೆ ಲೋಕಾಯುಕ್ತರ ದಾಳಿ; ಲಂಚ ಪಡೆಯುತ್ತಿದ್ದ ಅಸಿಸ್ಟೆಂಟ್ ಇಂಜಿನಿಯರ್ ಬಲೆಗೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೆರೆ ಅಭಿವೃದ್ಧಿ ಕಾಮಗಾರಿಗೆ 60% ಮೆಟೀರಿಯಲ್ಸ್ ಸಪ್ಲಾಯ್ ಮಾಡಿದ ಬಗ್ಗೆ ಎಮ್ ಬಿ ಬುಕ್ ಬರೆಯಲು ಲಂಚ ಕೇಳಿದ ಆರೋಪದಲ್ಲಿ ಸಹಾಯಕ ಇಂಜಿನಿಯರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಜರುಗಿದೆ.

ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮುಗಳಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿತ್ತು ಎನ್ನಲಾಗಿದೆ. ಅದಕ್ಕೆ 60% ನಷ್ಟು ಮೆಟೀರಿಯಲ್ಸ್ ಮಂಜುನಾಥ್ ಬುರಡಿ ಎಂಬುವರು ಸಪ್ಲಾಯ್ ಮಾಡಿದ್ದರು ಎನ್ನಲಾಗಿದೆ.

ಗ್ರಾಮದ ಯಲ್ಲಪ್ಪ ಹಿರೇಮನಿ ಎಂಬುವವರು ಕೆಲಸ ಮಾಡಿದ್ದು, ಎಮ್ ಬಿ ಬರೆಯಲು ತಾಲೂಕು ಪಂಚಾಯತಿಯ ತಾಂತ್ರಿಕ ಸಹಾಯಕ ಇಂಜಿನಿಯರ್ ಬಸವರಾಜ್ ಪಟ್ಟಣ್ಣವರ್ ಎಂಬುವವರು 20 ಸಾವಿರ ಲಂಚ ಕೇಳಿದ್ದರು ಎನ್ನಲಾಗಿದೆ. ಅದರಲ್ಲಿ ಈಗಾಗಲೇ 10 ಸಾವಿರ ಹಣ ಕೊಡಲಾಗಿತ್ತು. ಬುಧವಾರ ಮತ್ತೆ ಹಣ ಕೊಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

2021-22ರ ಸಾಲಿನ ಎನ್ ಆರ್ ಇಜಿ ಯೋಜನೆಯಡಿಯಲ್ಲಿ ಕೊತಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಗಳಿ ಗ್ರಾಮದ ಕೆರೆ ಅಭಿವೃದ್ಧಿ ಅಡಿ ಹತ್ತು ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿಯನ್ನು ಗ್ರಾಮದ ಯಲ್ಲಪ್ಪ ಹಿರೇಮನಿ ಎಂಬುವವರು ಕೆರೆ ಅಭಿವೃದ್ಧಿ ಅಡಿಯಲ್ಲಿ, ಪಿಚ್ಚಿಂಗ್, ಕಾಂಪೌಂಡ್ ನಿರ್ಮಾಣ ಹಾಗೂ ತಂತಿಬೇಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಇ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡಲು ಕೇಳಿದಾಗ 20‌ ಸಾವಿರ ಹಣ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಅದರಲ್ಲಿ ಇವತ್ತು ಬುಧವಾರ ರೋಣ ಪಟ್ಟಣದ ಸೂಡಿ ಕ್ರಾಸ್ ನ ಖಾಸಗಿ ಹೊಟೇಲ್ ನಲ್ಲಿ 10ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ಹಾಗೂ ಆಜೀಜ್ ಕಲಾದಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸಿಬ್ಬಂದಿಗಳಾದ ವಿರೂಪಾಕ್ಷ ಅರಿಷಿಣದ, ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಮುತ್ತುರೆಡ್ಡಿ ಬಾರಡ್ಡಿ, ಗುಬ್ಬಿ, ವಾಹನ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.


Spread the love

LEAVE A REPLY

Please enter your comment!
Please enter your name here