ಗದಗ ವಿಧಾನಸಭಾ ಮತಕೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ?: ಮಾಧ್ಯಮದವರ ಮುಂದೆ ಹೇಳಿದ್ದೇನು?

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ಗದಗ ವಿಧಾನಸಭಾ ಮತಕ್ಷೇತ್ರದಿಂದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರದ ಕುರಿತು
ಗದಗ ಜಿಲ್ಲಾ ಬಿಜೆಪಿಯಲ್ಲಿ ತೀವ್ರ ಚರ್ಚೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಪಷ್ಟನೆ‌ ನೀಡಿದ್ದಾರೆ.

ಬುಧವಾರ ಗದಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು,
224 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಇದ್ದರೆ ನಿಲ್ಲಬಹುದಿತ್ತು. ಉಪಚುನಾವಣೆ ವೇಳೆಯೂ ನನ್ನ ಹೆಸರು ಕೇಳಿ ಬರುತ್ತಿತ್ತು. ಬೇರೆ ಕಡೆ ಹೋದಾಗಲೂ ಈ ಮಾತು ಕೇಳಿ ಬರುತ್ತಿವೆ. ಆದರೆ, ರಾಜ್ಯದ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಸಂಘಟನೆ ಮಾಡುತ್ತಿದ್ದೇನೆ. ಉಳಿದಿರುವ ವಿಷಯದ ಬಗ್ಗೆ ನಾನು ಮಾತನಾಡುವುದಿಲ್ಲ. ಆ ಕುರಿತು ನಮ್ಮ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಆಚರಣೆ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಪರೋಕ್ಷವಾಗಿ ಈ ಬೆಳವಣಿಗೆಗೆ ಬೆಂಬಲ ನೀಡಿದ ಅವರು, ಮುಸ್ಲಿಂ ಸಮುದಾಯದ ವ್ಯಾಪಾರಿಗಳು ಅಂಗಡಿ ಮುಗ್ಗಟ್ಟುಗಳ ಬಾಗಿಲು ಹಾಕಿದರೂ ಈ ರೀತಿಯ ಪ್ರಕ್ರಿಯೆಗಳಿಂದ ಬೇರೆ ಬೇರೆ ಬೆಳವಣಿಗೆಗಳು ನಡೆಯುತ್ತಿವೆ. ಹೈಕೋರ್ಟ್ ತೀರ್ಪಿನ ವಿರುದ್ಧ ನಡೆದುಕೊಂಡ ರೀತಿಯೇ ಇದಕ್ಕೆಲ್ಲ ಕಾರಣವಾಗಿದೆ. ಹಿಜಾಬ್ ನಂತರ ಆಗುತ್ತಿರುವ ಬೆಳವಣಿಗೆ ಯಾರಿಗೂ ಶೋಭೆ ತರುವಂತದ್ದಲ್ಲ. ಹಿಜಾಬ್ ವಿಚಾರದಲ್ಲಿ ಮಕ್ಕಳ ಶಿಕ್ಷಣ ಹಾಳು ಮಾಡುವ ವ್ಯವಸ್ಥೆ ನಡೆಯಿತು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದವರು ಹತಾಸೆಯಾಗಿದ್ದಾರೆ.
ಒಂದು ತಿಂಗಳಿನಿಂದ ಅಧಿಕಾರಕ್ಕೆ ಬಂದೇ ಬಿಟ್ವಿ ಎನ್ನುವ ಉತ್ಸಾಹದಲ್ಲಿದ್ದರು. ಆದರೆ, ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಮುಖಂಡರಿಗೆ ನಿದ್ದೆ ಬರುತ್ತಿಲ್ಲ. ಬೇರೆ ಬೇರೆ ವಿಚಾರದಲ್ಲಿಯೂ ಗೊಂದಲದಲ್ಲಿದ್ದಾರೆ. ಕರ್ನಾಟಕವೂ ಸಹ ಕಾಂಗ್ರೆಸ್ ಮುಕ್ತವಾಗಲು ಬೇರೆ ಯಾರೂ ಬೇಡ ಅವರ ಮುಖಂಡರೇ ಸಾಕು ಎಂದು‌ ಕಿಚಾಯಿಸಿದರು.

ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಎಲ್ಲ ಧರ್ಮದವರು ಶಾಂತಿಯಿಂದ ಇರಬೇಕೆನ್ನುವುದು ಎಲ್ಲರಿಗೂ ಇದೆ. ಆದರೆ, ಹೈಕೋರ್ಟ್ ನಿರ್ಧಾರ ಬಂದ ನಂತರವೂ ಈ ರೀತಿಯ ಚಟುವಟಿಕೆಗಳನ್ನು ಯಾರೂ ಒಪ್ಪುವಂತದ್ದಲ್ಲ.
ಎಲ್ಲರೂ ಸಮಾಧಾನದಿಂದ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.


Spread the love

LEAVE A REPLY

Please enter your comment!
Please enter your name here