ಶಿರಹಟ್ಟಿ ತಾಲೂಕಿನಲ್ಲೂ ಅಪಾರ ಪ್ರಮಾಣದ ಮದ್ಯ ಜಪ್ತಿ…….
ವಿಜಯಸಾಕ್ಷಿ ಸುದ್ದಿ, ಗದಗ/ಶಿರಹಟ್ಟಿ
ಗದಗ ಶಹರ, ಬೆಟಗೇರಿ ಹಾಗೂ ಶಿರಹಟ್ಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಂತೆ ಕಂತೆ ಹಣ ಸೀಜ್ ಮಾಡಿ, ಅಪಾರ ಪ್ರಮಾಣದ ಮದ್ಯ ಜಪ್ತಿ ಮಾಡಿದ್ದಾರೆ.
ಬೆಟಗೇರಿಯ ನರೇಗಲ್ ರಸ್ತೆಯ ದಂಡಿನ ದುರ್ಗಮ್ಮ ದೇವಸ್ಥಾನದ ಬಳಿಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡುವಾಗ ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದಾಗ 5ಲಕ್ಷ 50 ಸಾವಿರ ಹಣ ಪತ್ತೆಯಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮುಳಗುಂದ ರಸ್ತೆಯ ಕುಟೀರ ಹೊಟೇಲ್ ಬಳಿಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡುವಾಗ ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 2ಲಕ್ಷ 18.500 ರೂ. ಗಳನ್ನು ಸೀಜ್ ಮಾಡಲಾಗಿದೆ.
ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಹಾಗೆಯೇ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಜ್ಜೂರ ತಾಂಡಾ( ಶಿವಾಜಿ ನಗರ)ದಲ್ಲಿ ಅಕ್ರಮ ಮದ್ಯ ಪತ್ತೆಯಾಗಿದೆ. ಸುಮಾರು 27ಸಾವಿರ ರೂ. ಮೌಲ್ಯದ 69.120 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ.

ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.