ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
Advertisement
ಗಣಪತಿ ವಿಸರ್ಜನೆ ಮಾಡಿ ವಾಪಾಸು ಬರುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ದಾರುಣವಾಗಿ ಮೃತಪಟ್ಟು, ಆರು ಜನ ಗಾಯಗೊಂಡ ದುರ್ಘಟನೆ ನಿನ್ನೆ ರಾತ್ರಿ ಜರುಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಈ ಅವಘಡ ನಡೆದಿದೆ.
ನಿನ್ನೆ ಏಳನೇ ದಿನದ ನಂತರ ಗಣಪತಿ ವಿಸರ್ಜನೆ ಅಂಗವಾಗಿ ಟ್ರ್ಯಾಕ್ಟರ್ ಮೂಲಕ ಗಣಪತಿ ಮೆರವಣಿಗೆ ಮಾಡಿಕೊಂಡು ಹೋಗಿ ವಿಸರ್ಜನೆ ಮಾಡಿ, ವಾಪಾಸು ಮನೆಗೆ ಬರುವಾಗ ಟ್ರ್ಯಾಕ್ಟರ್ ನ ಪೆಂಡಾಲ್ ಗೆ ವಿದ್ಯುತ್ ತಂತಿ ಸ್ಪರ್ಶಸಿ ರಾಜು(45) ರಚನಾ(33) ಹಾಗೂ ಪಾರ್ವತಿ (22) ಮೃತಪಟ್ಟಿದ್ದಾರೆ.
ಗಾಯಗೊಂಡ ಆರು ಜನರಲ್ಲಿ ಸಂಗೀತ ಹಾಗೂ ಪಲ್ಲವಿ ಎಂಬ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಹಾಸನದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಡ್ರೈವರ್ ಮಾತ್ರ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.