ಸಿದ್ಧತೆಗಳ ಪರೀಶಿಲನೆ ನಡೆಸಿದ ಶಾಸಕ ಕಳಕಪ್ಪ ಬಂಡಿ, ಡಿಸಿ ವೈಶಾಲಿ. ಎಂ.ಎಲ್
ವಿಜಯಸಾಕ್ಷಿ ಸುದ್ದಿ, ಗದಗ/ರೋಣ
ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನವು ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ರೋಣ ಹೊರವಲಯದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳನ್ನು ಶಾಸಕರಾದ ಕಳಕಪ್ಪ ಬಂಡಿ ಹಾಗೂ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ಪರಿಶೀಲಿಸಿದರು.
ಕಾರ್ಯಕ್ರಮದ ಮುಖ್ಯ ವೇದಿಕೆ, ಫಲಾನುಭವಿ, ಸಾರ್ವಜನಿಕರ ಆಸನ ವ್ಯವಸ್ಥೆ ಹಾಗೂ ವಾಹನ ನಿಲುಗಡೆ ಸೇರಿದಂತೆ ಸಮ್ಮೇಳನಕ್ಕೆ ಆಗಮಿಸುವ ಫಲಾನುಭವಿ ಹಾಗೂ ಸಾರ್ವಜನಿಕರಿಗೆ ಮಾಡಲಾದ ಊಟದ ವ್ಯವಸ್ಥೆ ಸಿದ್ಧತೆಯನ್ನು ಪರಿಶೀಲಿಸಿದರು. ಕಾರ್ಯಕ್ರಮದಲ್ಲಿ ಯಾವುದೇ ಅನಾನೂಕುಲಗಳಾಗದಂತೆ ನಿಗಾವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಅಪರ್ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತಹಸೀಲ್ದಾರ್ ವೀಣಾ ಉಂಕಿ, ಆಹಾರ ಇಲಾಖೆ ಉಪನಿರ್ದೆಶಕ ಗಂಗಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಸೋಮವಾರದಂದು ಜರುಗಲಿರುವ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೋಣ ಮತ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಜರುಗಲಿದೆ.