ವಿಜಯಸಾಕ್ಷಿ ಸುದ್ದಿ, ಗದಗ:
‘ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆಯೊಳಗೆ ನಿಂತು ಮತದಾರರಿಗೆ ಆಮಿಷವೊಡ್ಡಿ ಮತ ಹಾಕುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ 10ನೇ ವಾರ್ಡಿನ ಬಿಜೆಪಿ ಅಭ್ಯರ್ಥಿ ಮಾಧವ್ ಗಣಾಚಾರಿ ಆರೋಪಿಸಿದರು.
ಗದಗ-ಬೆಟಗೇರಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಟಗೇರಿಯ ಸೇಂಟ್ ಜಾನ್ ಶಾಲೆಯ ಮತಗಟ್ಟೆ ಸಂ.45ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ತಿಯಾಜ್ ಶಿರಹಟ್ಟಿ ಸೇರಿದಂತೆ ಅವರ ಕುಟಂಬದವರು ಮತದಾರರಿಗೆ ಹಣದ ಆಮಿಷವೊಡ್ಡಿ ಮತಯಾಚಿಸುತ್ತಿದ್ದಾರೆ. ಇದಕ್ಕೆ ಪೊಲೀಸರು ಸಾಥ್ ನೀಡುತ್ತಿದ್ದಾರೆ’ ಎಂದು ಗಂಭೀರವಾಗಿ ಆರೋಪಿಸಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಇಮ್ತಿಯಾಜ್ ಶಿರಹಟ್ಟಿ ಮಧ್ಯೆ ಪ್ರವೇಶಿಸಿ ‘ಸುಳ್ಳು ಹೇಳಬೇಡಿ ನಾವ್ಯಾರೂ ಮತಗಟ್ಟೆ ಆವರಣದಲ್ಲಿ ನಿಂತು ಮತಾಯಾಚಿಸಿಲ್ಲ’ ಎಂದು ಮಾಧವ್ ಗಣಾಚಾರಿ ಜೊತೆ ವಾಕ್ಸಮರ ನಡೆಸಿದರು. ಪರಿಸ್ಥಿತಿ ಕೈಮೀರುವ ಹಂತಕ್ಕೆತಲುಪಿದಾಗ ಪೊಲೀಸರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಮತಗಟ್ಟೆಯಿಂದ ಹೊರ ಹಾಕಿ ಪರಿಸ್ಥಿತಿ ತಿಳಿಗೊಳಿಸಿದರು.