ಅಷ್ಟಕ್ಕೂ ಬ್ಯಾನ್ ಮಾಡುವ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ…..
ವಿಜಯಸಾಕ್ಷಿ ಸುದ್ದಿ, ನರಗುಂದ
ಭಜರಂಗದಳವನ್ನು ನಿಷೇಧಿಸುವ ಕುರಿತು ರಾಜ್ಯಾದ್ಯಂತ ಚರ್ಚೆಗಳಾಗುತ್ತಿವೆ. ಈ ಬಗ್ಗೆ ನರಗುಂದದಲ್ಲಿ ಪ್ರತಿಕ್ರಿಯಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪಕ್ಷದ ವೇದಿಕೆಯಲ್ಲಿಯೇ ಇದರ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ.
ಭಜರಂಗದಳದ ನಿಷೇಧದ ಕುರಿತು ಚರ್ಚೆಗಳಾಗುತ್ತಿವೆ. ಬ್ಯಾನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಹಿರಿಯರು, ಪ್ರಣಾಳಿಕೆ ರಚನಾ ಸಮಿತಿಯ ಸದಸ್ಯರೂ ಆದ ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿ ಹೇಳಿಕೆ ನೀಡಿದ್ದಾರೆ.
ಹೀಗಿರುವಾಗ, ಬ್ಯಾನ್ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಇಷ್ಟಕ್ಕೂ, ಬ್ಯಾನ್ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ಹೊರತು ರಾಜ್ಯ ಸರ್ಕಾರಕ್ಕಲ್ಲ. ನನ್ನ ಅಭಿಪ್ರಾಯ ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಯಾವಗಲ್ ಸೇರಿದಂತೆ ಅನೇಕ ಮುಖಂಡರು ಇದ್ದರು.