ವಿಜಯಸಾಕ್ಷಿ ಸುದ್ದಿ, ಗದಗ:
ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮಂಗಳವಾರ ಬಿಡುಗಡೆ ಮಾಡಿದ್ದಾರೆ.
ಗದಗನ 35ನೇ ವಾರ್ಡಿನ ಸಮರ್ಥ ನಗರದ ಎಂಟು ವರ್ಷದ ಮಗುವಿಗೆ ಹಾಗೂ ಇನ್ನೋರ್ವ 6 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ. ಅದರಂತೆ,
ಬೆಟಗೇರಿಯ ಶ್ರೀಶರಣ ಬಸವೇಶ್ವರ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ, ರೋಣ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ, ಗದಗನ ಜಿಮ್ಸ್ ವಿಳಾಸವಿರುವ ಒಂಬತ್ತು ಜನರಲ್ಲಿ ಸೋಂಕು ಪತ್ತೆಯಾಗಿದೆ.
ಅದರಂತೆ, ದೆಹಲಿಯಿಂದ ಶಿರಹಟ್ಟಿ ತಾಲ್ಲೂಕಿನ ಇಟಗಿ ಗ್ರಾಮಕ್ಕೆ ಆಗಮಿಸಿರುವ ಓರ್ವ ವ್ಯಕ್ತಿಗೆ ಹಾಗೂ ಶಿರಹಟ್ಟಿ ತಾಲ್ಲೂಕು ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇದುವರೆಗೂ ಗದಗ ಜಿಲ್ಲೆಯಲ್ಲಿ 6,56,916
ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 7,08,696 ಮಾದರಿ ಸಂಗ್ರಹಿಸಲಾಗಿದೆ. ಅದರಲ್ಲಿ 6,81,838 ನಕಾರಾತ್ಮಕವಾಗಿದ್ದು, ಮಂಗಳವಾರದ 150 ಸೇರಿ 26,858 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇದುವರೆಗೂ 319 ಜನರು ಕೋವಿಡ್ ನಿಂದ ಮೃತಪಟ್ಟಿದ್ದು, ಮಂಗಳವಾರದ 30 ಸೇರಿ 25,862 ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 677 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.