ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023
Advertisement
ಗದಗ; ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು ವಿವಿಧೆಡೆ 18 ಚೆಕ್ ಪೋಸ್ಟಗಳನ್ನು ತೆರೆದು ನಿರಂತರವಾಗಿ ತಪಾಸಣೆ ಮಾಡಲಾಗುತ್ತಿದೆ.
ಬುಧವಾರ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್ ಪೋಸ್ಟನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ.

ಗದಗ ತಾಲೂಕಿನ ದುಂದೂರ ಚೆಕ್ ಪೋಸ್ಟ್ ನಲ್ಲಿಯೂ 50 ಲಕ್ಷ ರೂ. ಪತ್ತೆಯಾಗಿದೆ. ಯಾವುದೇ ದಾಖಲೆ ಇಲ್ಲದೆ ಕಾರಿನಲ್ಲಿ ಕಂತೆ ಕಂತೆ ಹಣ ಸಾಗಾಟ ಮಾಡುತ್ತಿದ್ದಾಗ ಈ ಹಣ ಸೀಜ್ ಆಗಿದೆ.
ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ ಎಂಬುದರ ಕುರಿತು ಸ್ಥಳಕ್ಕೆ ಆಗಮಿಸಿದ ಆದಾಯ ತೆರಿಗೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಗದಗ ಎಸ್ಪಿ ಬಿ.ಎಸ್ ನೇಮಗೌಡ ಮಾಹಿತಿ ನೀಡಿದ್ದಾರೆ.