ಕೃಷಿ ಸಲಕರಣೆಗಳು ಸುಟ್ಟು ಭಸ್ಮ…….
Advertisement
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಮೇಕೆಗಳ ಸಮೇತ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಇಬ್ರಾಹಿಂಸಾಬ ತಾಡಪತ್ರಿ ಎಂಬುವವರಿಗೆ ಸೇರಿದ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಈ ದುರಂತ ಸಂಭವಿಸಿದೆ.
ಕೃಷಿ ಸಲಕರಣೆಗಳು, ಪಂಪಸೆಟ್ಟು ಸೇರಿದಂತೆ ಅನೇಕ ಕೃಷಿ ಪರಿಕರಗಳು ಬೆಂಕಿಯಿಂದಾಗಿ ಸುಟ್ಟಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗದಂತೆ ತಡೆದರು.
ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.