ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ
Advertisement
ಕಾರು ಮತ್ತು ಲಾರಿ ಮಧ್ಯ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಗರದ ಹೊರವಲಯದ ಸೀಬಾರದ ಹತ್ತಿರ ಗುರುವಾರ ರಾತ್ರಿ ಜರುಗಿದೆ.
ಮೃತರನ್ನು ಬೆಂಗಳೂರು ಮೂಲದ ಭೂಮಿಕ, ಸಿಂಚನ ಹಾಗೂ ಮನೀಶ್ ಎಂದು ಗುರುತಿಸಲಾಗಿದೆ. ಗಿರಿಧರ್, ಆಶಾ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗೊಂಡಿದ್ದಾರೆ.
ಸ್ನೇಹಿತರೆಲ್ಲಾ ಬೆಂಗಳೂರಿಂದ ಶಿರಡಿ ಸಾಯಿಬಾಬ ದರ್ಶನಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ.
ಗಾಯಗೊಂಡ ಮೂವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗವೇ ಭೀಕರ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.