ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ
Advertisement
ಟಂಟಂ ಪಲ್ಟಿಯಾಗಿ ಪ್ರಯಾಣಿಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟು, ಆರು ಜನ ಗಾಯಗೊಂಡ ಘಟನೆ ಗಜೇಂದ್ರಗಡ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಗುರುವಾರ ನಡೆದಿದೆ.
ಬೈರಾಪುರ ಗ್ರಾಮದ ಶರಣಪ್ಪ (24) ಮೃತಪಟ್ಟವರು. ಗಾಯಗೊಂಡಿರುವ ಆರು ಜನರ ಪೈಕಿ ಮೂವರು ಜಿಲ್ಲಾಸ್ಪತ್ರೆ, ಉಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಂಟಂ ಬೈರಾಪುರ ಗ್ರಾಮದಿಂದ ಗಜೇಂದ್ರಗಡ ತೆರಳುತ್ತಿದ್ದಾಗ ಬೈರಾಪುರ ಕ್ರಾಸ್ ಬಳಿ ಟಂಟಂ ಪಲ್ಟಿಯಾಗಿದೆ.
ಸುದ್ದಿ ತಿಳಿಯುತ್ತಲೇ ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪಿಎಸ್‌ಐ ರಾಘವೇಂದ್ರ ಎಸ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.