ವಿಜಯಸಾಕ್ಷಿ ಸುದ್ದಿ, ಗದಗ
ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಇದನ್ನೂ ಓದಿ ಗದಗ ನಗರದಲ್ಲಿ ಭಾರಿ ಮನೆ ಕಳ್ಳತನ; 6.91 ಲಕ್ಷ ರೂ. ನಗದು, 9.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದ್ದು, ತಿಮ್ಮಣ್ಣ ಅಲಿಯಾಸ್ ಅಪ್ಪಣ್ಣ ತಂದೆ ಧರ್ಮಣ್ಣ ಕಳ್ಳಿಮನಿ (50) ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಸತತವಾಗಿ ಸುರಿದಿದ್ದ ಮಳೆಗೆ ಮನೆ ಗೋಡೆ ಸಂಪೂರ್ಣವಾಗಿ ನೆನದಿತ್ತು ಎನ್ನಲಾಗಿದೆ. ಹೀಗಾಗಿ ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಏಕಾಏಕಿ ಗೋಡೆ ಕುಸಿದು ಮೈಮೇಲೆ ಬಿದ್ದು ಪರಿಣಾಮ ತಿಪ್ಪಣ್ಣ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿದು ತಹಸೀಲ್ದಾರ್ ಕಿಶನ್ ಕಲಾಲ್, ಕಂದಾಯ ನಿರೀಕ್ಷಕ ಎಮ್ ಎ ನದಾಫ್, ಗ್ರಾಮ ಲೆಕ್ಕಾಧಿಕಾರಿ ಎಸ್. ಎಸ್. ಪಟ್ಟೇದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.