ಕೊಲೆಯಾದ ಸಮೀರ್ ಕುಟುಂಬಕ್ಕೆ ಪರಿಹಾರ ಕೊಡಿ; ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಒತ್ತಾಯ
ವಿಜಯಸಾಕ್ಷಿ ಸುದ್ದಿ, ನರಗುಂದ:
ಪಟ್ಟಣದಲ್ಲಿ ಕೊಲೆಯಾದ ಅಮಾಯಕ ಸಮೀರ ಶಹಾಪುರ ಕುಟುಂಬಕ್ಕೆ ಪರಿಹಾರ ನೀಡುವಂತೆ ಗದಗ ಜಿಲ್ಲಾಧಿಕಾರಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಘಟನೆಗೆ ಕಾರಣರಾದ ಎಲ್ಲರನ್ನು ಬಂಧಿಸುವವರೆಗೂ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.
ಕೊಲೆಯಾದ ಸಮೀರ ಶಹಾಪುರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಅವರು, ಅಮಾಯಕ ಯುವಕನ ಕೊಲೆಯಾಗಿರುವುದು ಅತ್ಯಂತ ದುರ್ದೈವದ ಸಂಗತಿ. ಮುಸ್ಲಿಂ ಸಮಾಜದವರು ಯಾವುದೇ ಕಾರಣಕ್ಕೂ ಆತಂಕ, ಉದ್ವೇಗಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದರು.
ನರಗುಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ದೊರಕಿಸಿಕೊಡಲು ಸರಕಾರದ ಮೇಲೆ ಒತ್ತಡ ತಂದು ಗಡುವು ನೀಡಲಾಗಿದೆ. ಅದಾಗ್ಯೂ ಮತ್ತೆನಾದರೂ ಸಹಾಯ, ಸಹಕಾರ ಬೇಕಿದ್ದರೆ ನನ್ನನ್ನು ಸಂಪರ್ಕಿಸಿ ಎಂದು ಭರವಸೆ ನೀಡಿದರು.