ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ
Advertisement
ಬಸ್ ನಿಲ್ದಾಣದ ಎದುರಿನ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಯಾವುದೇ ಅನುಮತಿಯಿಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳ ವಿರುದ್ಧ ಶಿರಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿರಹಟ್ಟಿ ತಾಲೂಕಿನ ದೇವಿಹಾಳದ ಗಂಗವ್ವ ಎಂಬ ಮಹಿಳೆ ಗ್ರಾಮದ ಬಸ್ ನಿಲ್ದಾಣದ ಮುಂದಿನ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಯಾವುದೇ ಅನುಮತಿಯಿಲ್ಲದೇ ತನ್ನ ಸ್ವಂತ ಲಾಭಕ್ಕಾಗಿ ರಟ್ಟಿನ ಬಾಕ್ಸ್‌ನಲ್ಲಿ ಮದ್ಯದ ಪ್ಯಾಕೆಟ್‌ಗಳನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಪಿಎಸ್‌ಐ ವಿಜಯಕುಮಾರ ತಳವಾರ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ.
17,669 ರೂ. ಮೌಲ್ಯದ ಮದ್ಯದ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದು, ಸದರಿ ಆರೋಪಿತಳ ಮೇಲೆ ಕ್ರಮ ಜರುಗಿಸುವಂತೆ ಸರಕಾರಿ ದೂರು ದಾಖಲಿಸಿದ್ದಾರೆ.