ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
Advertisement
ಚುನಾವಣಾ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೇ, ನೀತಿ ಸಂಹಿತೆ ಉಲ್ಲಂಘಿಸಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡ ಅಪರಾಧದ ಬಗ್ಗೆ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮೇ.1ರಂದು ಸಂಜೆ 6.33ರ ವೇಳೆಗೆ ʻಮೇ.1, ವಿಶ್ವ ಕಾರ್ಮಿಕ ದಿನ. ಶ್ರಮಜೀವಿಗಳಿಗೆ ವಿಶ್ವಕಾರ್ಮಿಕ ದಿನಾಚರಣೆಯ ಶುಭಾಶಯಗಳುʼ ಎಂಬ ಜಾಹಿರಾತು ಹಂಚಿಕೊಂಡು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು.
ಈ ಬಗ್ಗೆ ಶಿರಹಟ್ಟಿಯ ಚುನಾವಣಾಧಿಕಾರಿ ಎಲ್.ಗೋಪಾಲ ನಾಯಕ್ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ದೂರು ಸಲ್ಲಿಸಿದ್ದು, ಅಪರಾಧ: 0056/2023, ಐಪಿಸಿ ಕಲಂ: 171(ಎಚ್) ಅಡಿಯಲ್ಲಿ ನ್ಯಾಯಾಲಯದ ಅನುಮತಿಯೊಂದಿಗೆ ಲಕ್ಷ್ಮೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.