ಕುರಿ ಮೇಯಿಸಲು ಹೋದಾಗ ದುರ್ಘಟನೆ
Advertisement
ವಿಜಯಸಾಕ್ಷಿ ಸುದ್ದಿ, ಗದಗ
ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಜರುಗಿದೆ.
ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಶರಣಪ್ಪ (20) ಹಾಗೂ ದೇವೇಂದ್ರಪ್ಪ (16) ಮೃತಪಟ್ಟಿದ್ದಾರೆ. ಮತ್ತೊಬ್ಬ ಸುನೀಲ ಎಂಬಾತ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಡಿಲಿನ ಹೊಡೆತಕ್ಕೆ ಹಲವು ಕುರಿಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಮೂವರು ಕುರಿ ಮೇಯಿಸಲು ಹೋಗಿದ್ದರು ಎನ್ನಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂಧನ ಮುಗಿಲ ಮುಟ್ಟಿದೆ.
ಘಟನೆಯ ಸುದ್ದಿ ತಿಳಿದು ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.