ವಿಜಯಸಾಕ್ಷಿ ಸುದ್ದಿ, ಗದಗ:
Advertisement
ಜಿಲ್ಲೆಯ ಹಲವೆಡೆ ಸೋಮವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಗದಗ-ಬೆಟಗೇರಿ ನಗರದಲ್ಲಿ ಸುರಿದ ಗಾಳಿ, ಗುಡುಗು ಸಹಿತ ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದವು.

ಅವಳಿ ನಗರದ ಪಾಲಾ ಬದಾಮಿ ರಸ್ತೆಯ ಗಾಂಧಿ ಸರ್ಕಲ್ ಬಳಿ ಗಾಳಿ, ಮಳೆಯ ರಭಸಕ್ಕೆ ಬೃಹತ್ ಗಾತ್ರದ ಮರ ನೆಲಕ್ಕುರುಳಿತು. ಆದರೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಬಸ್ ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾದ ಘಟನೆ ನಡೆಯಿತು. ಕಣ್ಣುಮುಂದೆಯೇ ಮರ ಬೀಳುವುದನ್ನು ಕಂಡ ಮರದ ಪಕ್ಕದಲ್ಲಿಯೇ ನಿಂತಿದ್ದ ಜನರ ಎದೆ ಒಂದು ಕ್ಷಣ ಝಲ್ಲೆನಿಸಿತು.
ಅದರಂತೆ, ಮಹಾತ್ಮಾ ಗಾಂಧಿ ವೃತ್ತ ಸೇರಿದಂತೆ ಅವಳಿ ನಗರದ ವಿವಿಧೆಡೆ ಅಳವಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳ ಪ್ಲೆಕ್ಸ್, ಬ್ಯಾನರ್‌ಗಳು ಹಾರಿಹೋದವು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.
