ಪೊಲೀಸರ ಜೊತೆಗೆ ವಾಗ್ವಾದ…..
ವಿಜಯಸಾಕ್ಷಿ ಸುದ್ದಿ, ಮುಂಡರಗಿ
ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ನಡುವೆ ಗಲಾಟೆ ನಡೆದು ಚುನಾವಣೆ ಮುಂದೂಡಿದ ಘಟನೆ ನಡೆದಿದೆ.
ತಾಲ್ಲೂಕು ಬಿದರಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿ ಆಗಿತ್ತು. ಆದರೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ ಅಭ್ಯರ್ಥಿಯ ಜಾತಿಯ ಪ್ರಮಾಣಪತ್ರದ ಕುರಿತು ಕೆಲ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಚುನಾವಣಾ ಕರ್ತವ್ಯಕ್ಕೆ ಬಂದಿದ್ದ ಪೊಲೀಸರ ಜೊತೆಗೂ ಕೆಲ ಗ್ರಾಮಸ್ಥರು ವಾಗ್ವಾದ ನಡೆಸಿದರು.
ಚುನಾವಣಾ ಪ್ರಕ್ರಿಯೆ ನಡೆಯುವ ಕಚೇರಿಗೂ ನುಗ್ಗಲು ಮುಂದಾದ ಗ್ರಾಮಸ್ಥರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಕೆಲವರು ಪೇದೆಯೊಬ್ಬನ್ನನ್ನು ಎಳೆದಾಡಿದ್ದಾರೆ. ಇದರಿಂದಾಗಿ ಇಡೀ ಗ್ರಾಮ ಪಂಚಾಯತಿ ಆವರಣ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೆಲವರು ಚುನಾವಣಾ ಮುಂದೂಡಲು ಒತ್ತಾಯಿಸಿ ಪ್ರತಿಭಟಿಸಿದರು.
ಕೊನೆಗೆ ಚುನಾವಣೆ ಮುಂದೂಡಲಾಗಿದೆ ಎಂದು ಚುನಾವಣಾ ಅಧಿಕಾರಿ ವಿಶ್ವನಾಥ ಅವರು ಘೋಷಿಸಿದಾಗ ಪ್ರತಿಭಟನೆ, ಆಕ್ರೋಶ ತಣ್ಣಗಾಯಿತು.