ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಣಾಮ…
ವಿಜಯಸಾಕ್ಷಿ ಸುದ್ದಿ, ಗದಗ
ಗದಗನ ರಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ಜಾನುವಾರು ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಮಂಗಳವಾರದಂದು ನಡೆದಿತ್ತು.
ರಹಮತ್ ನಗರದ 12 ವರ್ಷದ ಮಹಮ್ಮದ್ ಅಮನ್ ಹಾಗೂ 14 ವರ್ಷದ ಸಂತೋಷ ಕುಂಬಾರ ಎಂಬ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ ಜಾನುವಾರು ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು; ಸ್ಥಳಕ್ಕೆ ಉಸ್ತುವಾರಿ ಸಚಿವ ಪಾಟೀಲ ಭೇಟಿ, ಸಾಂತ್ವನ
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ವಿನಂತಿಯ ಮೇರೆಗೆ ಮಾನ್ಯ ಮುಖ್ಯಮಂತ್ರಿಗಳು ಬಾಲಕರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿ ರಾತ್ರಿಯಿಡಿ ಕಾರ್ಯಾಚರಣೆ; ನೀರುಪಾಲಾಗಿದ್ದ ಇಬ್ಬರು ಬಾಲಕರು ಶವವಾಗಿ ಪತ್ತೆ
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಂಗಳವಾರದಂದು ಮೃತ ಬಾಲಕರ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು.