ವಿಜಯಸಾಕ್ಷಿ ಸುದ್ದಿ, ಗದಗ
ಧಾರವಾಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು. ಬುಧವಾರ ಸಂಜೆ ನರಗುಂದ ತಾಲೂಕಿನ ಸುರಕೋಡ ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳದ ಪ್ರವಾಹದಲ್ಲಿ ಸಿಲುಕಿದ್ದ ವೃದ್ಧೆಯನ್ನು ರಕ್ಷಣೆ ಮಾಡಲಾಗಿದೆ. ಜಮೀನಿಗೆ ಹೋಗಿ ಮನೆಗೆ ವಾಪಾಸು ಬರುವಾಗ ನೀರಿನಲ್ಲಿ ಸಿಲುಕಿದ್ದ ವೃದ್ಧೆಯನ್ನು ಗ್ರಾಮದ ಯಂಕಪ್ಪ ಹಾಗೂ ಶರಣಪ್ಪ ರಕ್ಷಣೆ ಮಾಡಿ ದಡಕ್ಕೆ ಸೇರಿಸಿದ್ದಾರೆ.
ಮುಂಜಾನೆಯಿಂದಲೂ ಜಿಲ್ಲೆಯ ನರಗುಂದ ತಾಲೂಕಿನ ಕುರ್ಲಗೇರಿ ಹಾಗೂ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತದೆ. ಕುರ್ಲಗೇರಿ ಹಾಗೂ ಯಾವಗಲ್ ಗ್ರಾಮದ ಬಳಿ ಇರುವ ಸೇತುವೆಗಳು ಜಲಾವೃತವಾಗಿದ್ದು, ನರಗುಂದ ಹಾಗೂ ರೋಣ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.
ಪ್ರವಾಹದಿಂದ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹತ್ತಿ, ಈರುಳ್ಳಿ ಹಾಗೂ ಗೋವಿನಜೋಳ ಬೆಳೆಗಳಲ್ಲಿ ನೀರು ನಿಂತು ಹಾನಿಯಾಗಿದೆ.


