ವಿಜಯಸಾಕ್ಷಿ ಸುದ್ದಿ, ನರಗುಂದ
ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿ ಆಚರಣೆಯ ಸಮಾರಂಭವನ್ನು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುತ್ತು ರಾಯರಡ್ಡಿ, ರಾಷ್ಟಪಿತ ಮಹಾತ್ಮ ಗಾಂಧಿ ಅವರು ಬ್ರಿಟಿಷರ ವಿರುದ್ಧ ಅಹಿಂಸಾ ಮಾರ್ಗದ ಮೂಲಕ ಹೋರಾಡಿ ವಿಶ್ವಕ್ಕೆ ಶಾಂತಿ ಮಂತ್ರ ಹೇಳಿಕೊಟ್ಟವರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮಹಾತ್ಮ ಗಾಂಧಿಯವರು ಪ್ರಮುಖ ಪಾತ್ರ ವಹಿಸಿದ್ದರು.
ಗಾಂಧಿಯವರ ಜನ್ಮದಿನವಾದ ಇಂದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸೋಣ ಎಂದರು.
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ ಮಿಷನ್ ಯೋಜನೆ ಹಾಗೂ ಸ್ವಚ್ಛತಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಆವರಣ ಹಾಗೂ ವಿಶೇಷಚೇತನರ ಉದ್ಯಾನವನ ಮತ್ತು ಗ್ರಾಮದ ಬೀದಿಗಳಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷ್ಮಣ ಕಂಬಳಿ, ಶರಣಬಸಪ್ಪ ಹಳೇಮನಿ, ಈರಮ್ಮ ಮುದಿಗೌಡ್ರ, ಶೋಭಾ ಕೋಣನ್ನವರ, ನಿರ್ಮಲಾ ತಳವಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕು. ಶೈನಾಜ್ ಮುಜಾವರ್, ಕಾರ್ಯದರ್ಶಿ ಕೆಂಚಪ್ಪ ಮಾದರ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.