ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಇದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ. ಗೃಹ ಮಂತ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆವಹಿಸಲಿ.
Advertisement
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಇನ್ನೂ ಹಲ್ಲೆಗೊಳಗಾದ ಯುವಕನ ತಾಯಿಗೆ ಬೆಳಗಾವಿಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯವನ್ನು ಬಿ.ವೈ. ವಿಜಯೇಂದ್ರ ವಿಚಾರಿಸಿದರು. ಇನ್ನೂ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ಪ್ರಕರಣದ ಬಗ್ಗೆ ಸುನೀಲ್ ಕುಮಾರ್ ಪ್ರಸ್ತಾಪಿಸಿದರು.