ವಿಜಯಪುರ: ಯಡಿಯೂರಪ್ಪ ಅವರನ್ನ ಜೈಲಿಗೆ ಕಳಿಸಿದ್ದೆ ವಿಜಯೇಂದ್ರ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಯಡಿಯೂರಪ್ಪ ಅವರನ್ನ ಜೈಲಿಗೆ ಕಳಿಸಿದ್ದೆ ವಿಜಯೇಂದ್ರ. ಸುಮ್ಮನೆ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಬಿಡು. ನಮ್ಮ ಕೈಯಲ್ಲಿ ಪಕ್ಷ ಸಿಕ್ಕರೆ 130 ಸೀಟ್ ತರುತ್ತೇವೆ. ಇಲ್ಲವಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
ಇನ್ನೂ ದೇವರಾಣೆ ಮಾಡಿ ಹೇಳುತ್ತೇನೆ. ಈಗಲೂ 60 ಮಂದಿ ಬಿಜೆಪಿಗೆ ಬರಲು ರೆಡಿಯಾಗಿದ್ದಾರೆ. ಆದರೆ ನಾವು ಆಪರೇಷನ್ ಮಾಡಲ್ಲ. ಕಾಂಗ್ರೆಸ್ ಶಾಸಕರು ಬರಬೇಕು ಎನ್ನುವ ಇಚ್ಛೆ ನಮಗೆ ಇಲ್ಲ. ಅವರು ಬಂದರೆ ಬಿಜೆಪಿಯ ಸಿದ್ಧಾಂತಗಳು ಹಾಳಾಗುತ್ತವೆ.
ಹಿಂದೂಗಳ ಮೇಲೆ ಅತ್ಯಾಚಾರವಾಗುತ್ತದೆ, ಲವ್ ಜಿಹಾದ್ ನಡೆಯುತ್ತವೆ. ಎಲ್ಲರನ್ನು ತೆಗೆದುಕೊಂಡರೆ ನಮ್ಮ ಸಿದ್ಧಾಂತ ಬಲಿಯಾಗುತ್ತೇವೆ. ಈ ಬಾರಿ ಬಲಿಯಾಗುವುದು ಬೇಡ ಎಂದು ಸುಮ್ಮನಿದ್ದೇವೆ ಎಂದರು.