ವಿಜಯಪುರ: ಗುಮ್ಮಟನಗರಿ ವಿಜಯಪುರ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ನಗರದ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
Advertisement
ನಗರದ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಚಿರತೆ ಓಡಾಟದಿಂದ ನಗರದ ಸಿಂದಗಿ ನಾಕಾ, ಮುನೇಶ್ವರಭಾಗ್ ಪ್ರದೇಶದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಮನೆ ಬಿಟ್ಟು ಜನರು ಹೊರ ಬರುತ್ತಿಲ್ಲ. ಹೀಗಾಗಿ ಚಿರತೆ ಬೇಗ ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಅರಣ್ಯಾದಿಕಾರಿಗಳಿಗೆ ಮನವಿ ಮಾಡಿದ್ದಾರೆ.