ವಿಜಯಪುರ: ಶಾಲೆ ಕಟ್ಟಡದಿಂದ ಬಿದ್ದು ಬಾಲಕ ಸಾವು

0
Spread the love

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್‌. ಎಂ ಶಾಹಾ ಶಾಲೆಯ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ ಮೃತಪಟ್ಟಿದ್ದಾನೆ. ಯುಕೆಜಿ ತರಗತಿಯಲ್ಲಿ ಓದುತ್ತಿದ್ದ ಶಿವರಾಜ್ ರೋಡಗಿ ಇಂದು ಬೆಳಗ್ಗೆ ಶಾಲೆಯ ಮೊದಲ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೆಳಗೆ ಬಿದ್ದಿದ್ದರಿಂದ ಶಿವರಾಜ್ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Advertisement

ತಮ್ಮ ಮಗ ಶಾಲೆಯ ಕಟ್ಟಡದಿಂದ ಕೆಳಗೆ ಬಿದ್ದಿದ್ದಾನೆ ಎಂದು ಪೋಷಕರಿಗೆ ಮಾಹಿತಿ ನೀಡಿದ ಶಾಲೆಯವರು ಆತನನ್ನು ಆಸ್ಪತ್ರೆಗೆ ಕರೆ ತಂದಿದ್ದಾರೆ. ಇನ್ನು ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದರಿಂದ ಬಾಲಕನ ಮೃತದೇಹವನ್ನು ಆಸ್ಪತ್ರೆಗೆ ತಂದು ಶಾಲಾ ಆಡಳಿತ ಮಂಡಳಿ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇಂಡಿ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here