HomeKarnataka NewsVijayanagara News: ರೈತನಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!

Vijayanagara News: ರೈತನಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!

For Dai;y Updates Join Our whatsapp Group

ವಿಜಯನಗರ: ರೈತನಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಬಂಧಿತ ಮಹಿಳಾ ಅಧಿಕಾರಿಯನ್ನು ಹೊಳಗುಂದಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಶಹನಾಜ್ ಬೇಗಂ ಎಂದು ಗುರುತಿಸಲಾಗಿದೆ.

ಕೊಟ್ಟೂರು ಗ್ರಾಮದ ರೈತ ಸಿದ್ಧಲಿಂಗಸ್ವಾಮಿ ಅವರು ಪಹಣಿ ತಿದ್ದುಪಡಿ ಮಾಡಿಸಲು ಬಂದಾಗ, ಕೆಲಸ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ನೀಡುವಂತೆ ಶಹನಾಜ್ ಬೇಗಂ ಕೇಳಿದ್ದರು ಎನ್ನಲಾಗಿದೆ.

ಈ ಕುರಿತು ರೈತರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಹಣ ಸ್ವೀಕರಿಸುತ್ತಿದ್ದ ವೇಳೆ ಶಹನಾಜ್ ಬೇಗಂ ಅವರನ್ನು ಸ್ಥಳದಲ್ಲೇ ಹಿಡಿದಿದ್ದಾರೆ.

ವಿಜಯನಗರ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಛಲವಾದಿ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಾಜೇಶ್ ಲಮಾಣಿ ಹಾಗೂ ಅಮರೇಶ್ ಹುಬ್ಬಳ್ಳಿ ಅವರ ತಂಡ ದಾಳಿ ನಡೆಸಿದೆ.

ಸದ್ಯ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img