ಧಾರವಾಡ: ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಶಾಸಕ ವಿನಯ್ ಕುಲಕರ್ಣಿ ಎಂದು ಪ್ರಕರಣದ ಪ್ರಮುಖ ಆರೋಪಿಯಾದ ಬಸವರಾಜ ಮುತ್ತಗಿ ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ.
ವಿನಯ್ ಕುಲಕರ್ಣಿ ಆಪ್ತನಾಗಿದ್ದ ಬಸವರಾಜ ಮುತ್ತಗಿ ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ನೀಡಿರುವ ತಪ್ಪೊಪ್ಪಿಗೆ ವಿನಯ್ ಕುಲಕರ್ಣಿ ಪಾತ್ರದ ಕುರಿತು ವಿಸ್ತ್ರತವಾಗಿ ಮಾಹಿತಿ ನೀಡಿದ್ದಾರೆ. ಈ ಹೇಳಿಕೆಯಿಂದ ವಿನಯ್ ಕುಲಕರ್ಣಿ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನೀಡಿರುವ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ವಿನಯ್ ಕುಲಕರ್ಣಿ ಪಾತ್ರದ ಕುರಿತು ಬಸವರಾಜ ಮುತ್ತಗಿ ಮಾಹಿತಿ ನೀಡಿದ್ದಾರೆ. ಯೋಗೇಶ್ ಗೌಡ ಹತ್ಯೆಗೆ ಧಾರವಾಡದ ಯುವಕರು ಒಪ್ಪಿಗೆ ಸೂಚಿಸಲಿಲ್ಲ. ಹೀಗಾಗಿ, ಶಾಸಕ ವಿನಯ್ ಕುಲಕರ್ಣಿ ಸೂಚನೆ ಮೇರೆಗೆ ಬೆಂಗಳೂರಿನಿಂದ ಕರೆಸಿ ಸಂಚು ರೂಪಿಸಿ ಯೋಗೀಶ್ ಗೌಡನನ್ನು ಕೊಲೆ ಮಾಡಲಾಗಿದೆ ಎಂದು ಮುತ್ತಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಯೋಗೇಶ್ ಗೌಡ ಹತ್ಯೆಗೆ ಮೊದಲು ಧಾರವಾಡದ ವಿಕಾಸ್ ಕಲಬುರಗಿ, ಕೀರ್ತಿ ಕುಮಾರ್ ಕುರಹಟ್ಟಿ, ವಿಕ್ರಂ ಬಳ್ಳಾರಿ, ಸಂದೀಪ್ ಸವದತ್ತಿ, ಮಹಾಬಲೇಶ್ವರ ಅವರಿಗೆ ಸುಪಾರಿ ನೀಡಲು ವಿನಯ್ ಕುಲಕರ್ಣಿ ನಿರ್ಧರಿಸಿದ್ದರು ಅಂತೆ. ಅದರಂತೆ, ಈ ಹುಡುಗರು ಮುಂದೆ ವಿನಯ್ ಕುಲಕರ್ಣಿ ವಿಚಾರ ಪ್ರಸ್ತಾಪಿಸಲಾಯಿತು. ಆದರೆ, ಅವರು ತಿರಸ್ಕರಿಸಿದರು ಎಂದು ಮುತ್ತಗಿ ತಪ್ಪೊಪ್ಪಿಗೆಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.



