HomeKarnataka Newsಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಕ್ರಮ ಕೈಗೊಳ್ಳುವಂತೆ ಶಾಸಕ ಬೆಲ್ಲದ ಆಗ್ರಹ

ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಕ್ರಮ ಕೈಗೊಳ್ಳುವಂತೆ ಶಾಸಕ ಬೆಲ್ಲದ ಆಗ್ರಹ

For Dai;y Updates Join Our whatsapp Group

Spread the love

ಧಾರವಾಡ: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಅರವಿಂದ್ ಬೆಲ್ಲದ ಆಗ್ರಹ ಮಾಡಿದ್ದಾರೆ.

ಎಸ್, ವಾರ್ಡ್ ನಂಬರ್ 34ರ ಉಪವಿಭಾಗದ ಹುಬ್ಬಳ್ಳಿ-ದೇವರಗುಡಿಹಾಳ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಸಮಾರಂಭ ಇತ್ತೀಚೆಗೆ ಜರುಗಿದೆ. ಈ ಸಮಾರಂಭವು ಸರ್ಕಾರಿ ಕಾರ್ಯಕ್ರಮವಾಗಿತ್ತು. ಆದರೆ, ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅಳವಡಿಸಲಾಗಿದ್ದ ಬ್ಯಾನರ್‌ನಲ್ಲಿ ಕಾಂಗ್ರೆಸ್ ಪಕ್ಷದ ಚಿನ್ಹೆ ಮತ್ತು ಶಿಷ್ಟಾಚಾರದ ಪ್ರಕಾರ ಸಂಬಂಧಿಸದೇ ಇರುವ ವ್ಯಕ್ತಿಯ ಭಾವ ಚಿತ್ರವನ್ನು ಮುದ್ರಿಸಿ ಹಾಕಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳಾದ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಜಿಪಂ ಸಿಇಓ ಭುವನೇಶ ಪಾಟೀಲ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಕಾಂಗ್ರೆಸ್ ಕಾರ್ಯಕರ್ತರಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ್ದಾರೆ. ಇದು ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆಯಾಗಿದ್ದು ಕಂಡು ಬರುತ್ತದೆ. ಈ ಕೂಡಲೇ ಈ ವಿಷಯಕ್ಕೆ ಸಂಬಂಧಿಸಿದವರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಬೆಲ್ಲದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಒತ್ತಾಯಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!