ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ನೇಪಾಳ ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ತೀವ್ರಗೊಂಡ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಈ ತೀರ್ಮಾನ ಕೈಗೊಂಡಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಸರ್ಕಾರ ನಿಷೇಧ ಹೇರಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಪ್ರತಿಭಟನೆಯಲ್ಲಿ ಸುಮಾರು 19 ಮಂದಿ ಉಸಿರುಚೆಲ್ಲಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಪ್ರಕ್ಷುಬ್ಧ ವಾತಾವರಣದ ನಡುವೆ ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ನೇಪಾಳದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧ ಇದೀಗ ಭೀಕರ ಸ್ವರೂಪ ಪಡೆದುಕೊಂಡಿದ್ದು ಸಾಮಾಜಿಕ ಮಾಧ್ಯಮಗಳ ಮೇಲಿನ ಸರ್ಕಾರದ ನಿಷೇಧವನ್ನು ವಿರೋಧಿಸಿ ನೂರಾರು ಪ್ರತಿಭಟನಾಕಾರರು ಪ್ರಧಾನಿ ಕಛೇರಿಯನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಹಲವಾರು ರಾಜಕೀಯ ನಾಯಕರ ನಿವಾಸಗಳನ್ನು ಧ್ವಂಸಗೊಳಿಸಿರುವ ಬಗ್ಗೆಯೂ ವರದಿಯಾಗಿದೆ. ಪರಿಸ್ಥಿತಿ ವೇಗವಾಗಿ ಹದಗೆಡುತ್ತಿರುವ ನಡುವೆಯೇ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನಿರ್ಧಾರ ಹೊರಬಿದ್ದಿದೆ.