ಕೊಳಗೇರಿ ಪ್ರದೇಶಗಳನ್ನು ತೆರವುಗೊಳಿಸಿದರೆ ಉಗ್ರ ಹೋರಾಟ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದಲ್ಲಿ ಸುಮಾರು 48 ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇನ್ನು ಸುಮಾರು 30ಕ್ಕೊ ಹೆಚ್ಚು ಗುಡಿಸಲು ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಧಿಕೃತವಾಗಿ ಘೋಷಣೆ ಮಾಡಬೇಕಾಗಿದೆ. ಘೋಷಿತ ಮತ್ತು ಅಘೋಷಿತ ಸ್ಲಂ ಪ್ರದೇಶಗಳಲ್ಲಿ ವಸತಿ ಹಾಗೂ ನಾಗರೀಕ ಸೌಲಭ್ಯಗಳನ್ನು ಕಲ್ಪಿಸಬೇಕಾದ ಅಧಿಕಾರಿಗಳು ನಗರದ ಗೋಸಾವಿ ಸ್ಲಂ ಮತ್ತು ಕೆಲವುಂದು ಕೊಳಗೇರಿ ಪ್ರದೇಶಗಳನ್ನು ವಿನಾಕಾರಣ ತೆರವುಗೊಳಿಸುವ ಹುನ್ನಾರ ನಡೆಸುತ್ತಿರುವ ನಗರಸಭೆ ಪೌರಾಯುಕ್ತರ ಕ್ರಮವನ್ನು ಖಂಡಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ನಗರಸಭೆಯೆದುರು ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆಯಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಗದಗ-ಬೆಟಗೇರಿ ನಗರದ ಅಘೋಷಿತ ಗುಡಿಸಲು ಪ್ರದೇಶಗಳ ಘೋಷಣೆಗಾಗಿ ನಗರಸಭೆಯಿಂದ ನಿರಪೇಕ್ಷಣಾ ಪತ್ರ ನೀಡಲು ಸ್ಲಂ ಬೋರ್ಡ್ನಿಂದ ಪತ್ರ ಕಳುಹಿಸಿ 3 ವರ್ಷ ಕಳೆದಿದ್ದರೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನೈಜ್ ಗುಡಿಸಲು ಪ್ರದೇಶವನ್ನು ಗುರುತಿಸಿ ವಸತಿ ಯೋಜನೆ ಕಲ್ಪಿಸಬೇಕಾದ ನಮ್ಮ ಜನಪ್ರತಿಧಿಗಳು ಮತ್ತು ಅಧಿಕಾರಿಗಳು ವಸತಿ ಮನೆಗಳು ಹಂಚಿಕೆ ಮಾಡುವ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕ ವಲಯದ ಕುಟುಂಬಗಳನ್ನು ಕಡೆಗಣಿಸಿರುವ ಕ್ರಮವನ್ನು ಖಂಡಿಸುತ್ತೇವೆ ಎಂದರು.

ಗದಗ ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹರುನಿಸಾ ಢಾಲಾಯತ, ಸ್ಲಂ ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಖಾಜಾಸಾಬ ಇಸ್ಮಾಯಿಲನವರ, ಮಲೇಶಪ್ಪ ಕಲಾಲ, ಮುನ್ನಾ ಅಗಡಿ, ಮೆಹರುನಿಸಾ ಡಂಬಳ, ಮೂಮುನ ಬೈರಕದಾರ, ಮಕ್ತುಮಸಾಬ ಮುಲ್ಲಾನವರ, ಮಂಜುನಾಥ ಶ್ರೀಗಿರಿ, ದಾದು ಗೋಸಾವಿ, ರವಿಕುಮಾರ ಗೋಸಾವಿ, ಸಾಕ್ರುಬಾಯಿ ಗೋಸಾವಿ, ಮಂಜುನಾಥ ಒಂಟಿಯಲಿ, ರೇಷ್ಮಾ ಢಾಲಾಯತ, ಶಂಕ್ರಪ್ಪ ಶಿರಹಟ್ಟಿ, ಗೌಸಸಾಬ ಅಕ್ಕಿ, ಸಲೀಂ ಹರಿಹರ ಹಾಗೂ ನಗರದ ವಿವಿಧ ಸ್ಲಂ ಪ್ರದೇಶದ ನೂರಾರು ಸ್ಲಂ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿ, ನಮ್ಮ ದೇಶದ ಸಂವಿಧಾನದ ಪ್ರಕಾರ ದೇಶದಲ್ಲಿ ವಾಸಿಸುವ ಪ್ರತಿಯೂಬ್ಬ ನಾಗರಿಕನಿಗೆ ಬದುಕುವ ಹಕ್ಕು ಇದೆ. ಎಲ್ಲರಿಗೂ ನಮ್ಮ ದೇಶದ ನೆಲದಲ್ಲಿ ವಸತಿ ಮತ್ತು ಮೂಲಭೂತ ಸೌಲಭ್ಯಗಳನ್ನು ಸಮಾನವಾಗಿ ಪಡೆದುಕೊಳ್ಳುವ ಅಧಿಕಾರವಿದೆ. ಆದರೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಮ್ಮ ದೇಶದ ಸಂವಿಧಾನದ ಆಶಯವನ್ನು ಗಾಳಿಗೆ ತೂರಿ ಬಡಜನರ ಮತ್ತು ಸ್ಲಂ ಜನರ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯವಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here