ವಿರಾಟ್​ ಕೊಹ್ಲಿ ಆರ್​ಎಸ್​ಎಸ್​ ಕಾರ್ಯಕರ್ತ: ನಕಲಿ ಪೋಸ್ಟ್ ಬಗ್ಗೆ ಲಕ್ಷ್ಮಣ್ ಕೊಟ್ರೂ ಸ್ಪಷ್ಟನೆ!

0
Spread the love

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಚಾಂಪಿಯನ್ ಟ್ರೋಫಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಅದ್ಭುತ ಶತಕದ ನೆರವಿನಿಂದ ಭಾರತ ತಂಡ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು.

Advertisement

ವಿರಾಟ್ ಕೊಹ್ಲಿಗೆ ಭಾರತೀಯ ಅಭಿಮಾನಿಗಳಿಂದ ಸಿಗುವ ಪ್ರೀತಿಗಿಂತ ಪಾಕಿಸ್ತಾನದಲ್ಲಿ ಹೆಚ್ಚಿನ ಅಭಿಮಾನಿಗಳಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಶತಕವನ್ನು ಪಾಕಿಸ್ತಾನಿ ಅಭಿಮಾನಿಗಳು ಆಚರಣೆ ಮಾಡಿದ್ದಾರೆ. ಇದರ ಮಧ್ಯ ವಿರಾಟ್​ ಕೊಹ್ಲಿ ಆರ್​ಎಸ್​ಎಸ್​ ಕಾರ್ಯಕರ್ತ ಎನ್ನುವ ಪೋಸ್ಟ್​ ಸಹ ಹರಿದಾಡುತ್ತಿದೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೆಸರಿನಲ್ಲಿ ಪೋಸ್ಟ್ ಮಾಡಲಾಗಿದ್ದು, ಇದೀಗ ಇದಕ್ಕೆ ಸ್ವತಃ ಲಕ್ಷ್ಮಣ್ ಅವರೇ ಸ್ಪಷ್ಟೀಕರಣ ನೀಡಿದ್ದಾರೆ.

ತಮ್ಮ ಹೆಸರಿನಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಆಕ್ಷೇಪಾರ್ಹ ರೀತಿಯ ಹೇಳಿಕೆಯ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ, ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಈ ರಾಜ್ಯದ ಜನತೆಗೆ ಬರೀ ಸುಳ್ಳನ್ನ ಹೇಳುತ್ತಾ ಬಂದಿದ್ದಾರೆ. ಅದಕ್ಕೆ ಇದೊಂದು ಸಣ್ಣ ಉದಾಹರಣೆ. ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಯ ಹೆಸರನ್ನು ಬಳಸಿಕೊಂಡು ಹಿಂದುಗಳ ಭಾವನೆಯನ್ನು ಕೆಣಿಸುವಂತಹ ಪೋಸ್ಟ್‌ಗಳನ್ನು ಹಾಕಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ/ ಸದ್ಯದಲ್ಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here