ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ರೋಫಿ ಗೆಲ್ಲುವ ಕನಸು ಕೊನೆಗೂ ನನಸಾಗಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ಬೆಂಗಳೂರು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಮಣಿಸಿ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ.
ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳಲ್ಲಿ ಆನಂದಬಾಷ್ಪ ಉಕ್ಕಿ ಹರಿಯಿತು. ಗೆಲುವು ಖಚಿತವಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಕಣ್ಣೀರು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ತುಂಬಿಕೊಂಡು ಬಿಕ್ಕಿ-ಬಿಕ್ಕಿ ಅತ್ತುಬಿಟ್ಟರು.
18 ಆವೃತ್ತಿಗಳಲ್ಲಿ ಯಾವುದೇ ತಂಡಕ್ಕೆ ಹೋಗದೇ ಹಠ ಹಿಡಿದು ಆರ್‌ಸಿಬಿಯಲ್ಲೇ ಇದ್ದ ವಿರಾಟ್ ಕೊಹ್ಲಿ ಟ್ರೋಫಿ ಗೆಲ್ಲುವ ಆಸೆ ಕೊನೆಗೂ ಈಡೇರಿದೆ. ಕಪ್ ಗೆಲುವು ಖಚಿತವಾಗುತ್ತಿದ್ದಂತೆ ಕೊಹ್ಲಿ ಭಾವುಕರಾಗಿ ಕಣ್ಣೀರಿಟ್ಟರು. ಆ ಒಂದು ಕ್ಷಣ ಅಭಿಮಾನಿಗಳು ತೃಪ್ತಿ ಭಾವದ ಕಣ್ಣೀರು ಹರಿಸಿದರು.
ಪಂಜಾಬ್ ವಿರುದ್ಧದ ಪಂದ್ಯ ಕೊನೆವರೆಗೂ ರೋಚಕತೆಯಿಂದ ಕೂಡಿತ್ತು. ಗೆಲುವು ಖಚಿತವಾಗುತ್ತಿದ್ದಂತೆ ಆರ್‌ಸಿಬಿ ಆಟಗಾರರೆಲ್ಲರೂ ಮೈದಾನದಲ್ಲಿ ಭಾವುಕರಾದರು. ಯಾರಲ್ಲೂ ಕಣ್ಣೀರು ತಡೆಯಲು ಆಗಲಿಲ್ಲ. ಈ ಕ್ಷಣ ನೋಡಿ ಅಭಿಮಾನಿಗಳಲ್ಲೂ ಕೂಡ ಸಂತಸದ ಹೊನಲು ಕಣ್ಣಲ್ಲಿ ಹರಿಯಿತು.
ಈ ವೇಳೆ ಮೈದಾನಕ್ಕೆ ಎಂಟ್ರಿ ಕೊಟ್ಟ ದಂತಕಥೆ ಎಬಿ ಡಿವಿಲಿಯರ್ಸ್ ಅವರನ್ನು ಬಿಗಿದಪ್ಪಿಕೊಂಡು ವಿರಾಟ್ ಕೊಹ್ಲಿ ಕಣ್ಣೀರು ಹಾಕಿದರು. ಎಬಿಡಿ ಕೂಡ ಅಷ್ಟೇ ಭಾವುಕತೆಯಿಂದ ಕೊಹ್ಲಿಯನ್ನು ತಬ್ಬಿಕೊಂಡರು. ಈ ಸನ್ನಿವೇಶ ಕೂಡ ವಿಶೇಷವಾಗಿತ್ತು.
ಇನ್ನೂ 18 ವರ್ಷಗಳ ಕಾಯುವಿಕೆ ಕೊನೆಗೂ ಮುಗಿದಿದೆ. 18ನೇ ನಂಬರ್ ಜೆರ್ಸಿ ಧರಿಸಿದ್ದ ವಿರಾಟ್ ಕೊಹ್ಲಿ ಕನಸು ಕೊನೆಗೂ ನನಸಾಗಿದೆ. ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೋಟ್ಯಂತರ ಅಭಿಮಾನಿಗಳಿಗೆ ದೊಡ್ಡ ಉಡುಗೊರೆಯನ್ನು ನೀಡಿದೆ. ಪ್ರಶಸ್ತಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ತಂಡ 190 ರನ್ ಗಳಿಸಿತು, ಆದರೆ ಪಂಜಾಬ್ ತಂಡವು ಉತ್ತಮ ಆರಂಭದ ಹೊರತಾಗಿಯೂ ಗುರಿಯನ್ನು ತಲುಪಲು ಸಾಧ್ಯವಾಗಲಿಲ್ಲ. ಕೊನೆಗೂ ಆರ್ ಸಿಬಿ ಕಪ್ ಗೆದ್ದು ಬೀಗಿದೆ.