ರಾಜಧಾನಿ ಬೆಂಗಳೂರಿನಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಗೌರವಕ್ಕೆ ಧಕ್ಕೆಯಾದ ಘಟನೆ ನಡೆದಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು ವಿಷ್ಣು ದಾದ ಬ್ಯಾನರ್ ಮುಂದೆ ಅವಹೇಳನಕಾರಿ ಸನ್ನೆಗಳು ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದೆ.
ಘಟನೆ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಕೋಪ ಉಕ್ಕಿ ಬಂದಿದೆ. ಕನ್ನಡಿಗರ ಹೆಮ್ಮೆಯ ನಟರ ಘನತೆಯನ್ನು ಅರಿಯದೇ ಇಂತಹ ಕೃತ್ಯ ಎಸಗಿರುವುದು ದುಃಖಕರ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ಬೆಂಗಳೂರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಗಳನ್ನು ಗುರುತಿಸಿ ಠಾಣೆಗೆ ಕರೆತಂದಿದ್ದಾರೆ. ಅಪ್ರಾಪ್ತರಾಗಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಬದಲು ಎಚ್ಚರಿಕೆ ನೀಡಲಾಗಿದ್ದು, ತಪ್ಪೊಪ್ಪಿಗೆ ಪತ್ರ ಬರೆಯಿಸಿಕೊಂಡು ಬಿಡಲಾಗಿದೆ.
ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ಕಲಾವಿದರ ಗೌರವ ಮತ್ತು ಯುವಕರ ಜವಾಬ್ದಾರಿತನದ ಕುರಿತು ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.



