ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್!

0
Spread the love

ಮಂಗಳೂರು:- ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್ವೆಲ್ ಅವರನ್ನು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ಮುಸ್ಲಿಮರನ್ನು ಒಲೈಸಿಲು ಸರ್ಕಾರ ಪೊಲೀಸರಿಗೆ ಒತ್ತಡ ತಂದಿದೆ. ಸುಹಾಸ್ ಶೆಟ್ಟಿ ಹತ್ಯೆಯ ದಿನ ಬಂದ್​ಗೆ ಕರೆ ನೀಡಿರುವುದಕ್ಕೆ ಕೇಸ್ ಆಗಿತ್ತು. ಪ್ರಕರಣ ದಾಖಲಾಗಿ 20 ದಿನಗಳು ಕಳೆದುಹೋಗಿವೆ. ಈಗ ಬಂಧನ ಮಾಡಿರುವುದು ಯಾಕೆ? ಇವತ್ತಿನ ಘಟನೆ ಹಿನ್ನೆಲೆಯಲ್ಲಿ ಮುಸ್ಲಿಮರನ್ನು ಓಲೈಕೆ ಮಾಡಲು ಬಂಧಿಸಲಾಗಿದೆ. ಜೈಲಿಗೆ ಹಾಕಲ್ಲ ಅಂತ ಪೊಲೀಸ್​ ಆಯುಕ್ತರು ಹೇಳಿದ್ದಾರೆ. ಶರಣ್ ಪಂಪ್ವೆಲ್​ ಅವರನನ್ನು ಜೈಲಿಗೆ ಹಾಕಿದರೆ ಮುಂದೆ ಆಗುವ ಘಟನೆಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಸರ್ಕಾರ ಮತ್ತು ಪೊಲೀಸರಿಗೆ ವಿಹೆಚ್​ಪಿ ಮುಖಂಡ ಮುಖಂಡ ಪ್ರದೀಪ್ ಸರಿಪಲ್​​ ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಮಂಗಳವಾರ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಕೊಲೆಯಾಗಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here