ಬೆಂಗಳೂರು:- ಕೆಂಗೇರಿಯಲ್ಲಿ ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ ವಿಧಿವಶರಾಗಿದ್ದಾರೆ.
ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.



