ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಮ್ಮ ಜನ್ಮದಿನದ ಪ್ರಯುಕ್ತ ಇಂದು ಬೆಳಗಾವಿ ಜಿಲ್ಲೆಯ ಐತಿಹಾಸಿಕ ಶ್ರೀಕ್ಷೇತ್ರ ಕಲ್ಲೋಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ದರ್ಶನಾಶೀರ್ವಾದ ಪಡೆದರು,
Advertisement
ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ ಸಿಗಲಿ ಹಾಗೂ ರೈತ ಸಮುದಾಯಕ್ಕೆ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ಲಭಿಸಲಿ ಎಂದು ಪ್ರಾರ್ಥಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ನಾಯ್ಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಸುಭಾμï ಪಾಟೀಲ್, ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


