HomePolitics Newsಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ : ಎಸ್.ಕೆ. ಇನಾಮದಾರ

ಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ : ಎಸ್.ಕೆ. ಇನಾಮದಾರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ : ಸಂವಿಧಾನಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ ಅದನ್ನು ಲಘುವಾಗಿ ಪರಿಗಣಿಸದೆ, ತಪ್ಪದೇ ಮತದಾನ ಮಾಡಿ ಎಂದು ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.

ರೋಣ ತಾಲೂಕಿನ ಚಿಕ್ಕಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಸಲಾಪೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆದ ಸಮುದಾಯ ಕಾಮಗಾರಿಯ ಬದು ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ಕಡ್ಡಾಯ ಮತದಾನ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ಮಾತನಾಡಿದ ಅವರು, ಉತ್ತಮ ಭಾರತಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು. ಮತದಾನ ಮಾಡುವುದು ನಮ್ಮ ನಾಗರಿಕ ಜವಾಬ್ದಾರಿ ಆಗಿದೆ ಎಂದರು.

matadana

ಚುನಾವಣೆಯಲ್ಲಿ ಮತ ಹಾಕುವ ಸ್ವಾತಂತ್ರ್ಯ ನಿಮಗಿದೆ. ಮತ ಹಾಕಲು ಯಾರೂ ಆಮಿಷಕ್ಕೆ ಒಳಗಾಗಬೇಡಿ. ಉತ್ತಮ ನಾಳೆಗಳು ಬೇಕಾದರೆ ಮತದಾನ ಮಾಡುವ ಮೂಲಕ ಎಲ್ಲಾ ಅರ್ಹ ನಾಗರಿಕರು ಮತದಾನದ ಹಕ್ಕು ಚಲಾಯಿಸಬೇಕು. ಮತದಾರ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ. ಮತದಾನ ಮಾಡುವ ಮೂಲಕ ಆ ಬುನಾದಿಯನ್ನು ಸದೃಢಗೊಳಿಸಿ ಎಂದರು.

ಕಳೆದ ಬಾರಿ ರೋಣ ತಾಲೂಕಿನಲ್ಲಿ ಮತದಾನ ಪ್ರಮಾಣ ಶೇ. 69 ಆಗಿದೆ. ಈ ಬಾರಿ ನೂರಕ್ಕೆ ನೂರರಷ್ಟು ಮಾಡುವ ಗುರಿಯನ್ನು ಹೊಂದಿದ್ದೇವೆ. ನಿಮ್ಮ ಗ್ರಾಮದಲ್ಲಿ 800ಕ್ಕೂ ಹೆಚ್ಚು ಮತಗಳು ಇವೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ಮತದಾನದಿಂದ ದೂರ ಉಳಿಯಬೇಡಿ ಎಂದರು.

ಈ ಸಂದರ್ಭದಲ್ಲಿ ಚಿಕ್ಕಮಣ್ಣೂರ ಗ್ರಾ.ಪಂ ಬಿಎಫ್‌ಟಿ ಈರಣ್ಣ ಬೇಲೆರಿ ನರೇಗಾ ಕೂಲಿಕಾರರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.

 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಶೀದ್ ಹುಣಸಿಮರದ ಮತಾನಾಡಿ, ನರೇಗಾದಲ್ಲಿ ಕೆಲಸ ಮಾಡುವ ಕೂಲಿಕಾರರಿಗೆ ದಿನವೊಂದಕ್ಕೆ 349 ರೂ. ನೀಡಲಾಗುತ್ತದೆ. ಬೇಸಿಗೆಯ ಅವಧಿಯಲ್ಲಿ ಬಡ ಜನರಿಗೆ, ಅವರ ಮಕ್ಕಳಿಗೆ ಫೀ ತುಂಬಲು ನರೇಗಾ ಯೋಜನೆ ಅನುಕೂಲಕರವಾಗಿದೆ. ಅಲ್ಲದೇ ಈ ಹಣವನ್ನು ಕೂಲಿಕಾರರು ಮುಂಗಾರು ಆರಂಭದಲ್ಲಿ ಕೃಷಿ ಚಟುವಟಿಕೆಗಳಿಗೆ ಬಳಸಲು ಸಹಾಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!