ಮತಗಳ್ಳತನ ಆರೋಪ| ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ಮುಂದೆ ಬ್ಯಾಲೆಟ್ ಪೇಪರ್ ಬಳಕೆ- ಸಚಿವ ಹೆಚ್ ಕೆ ಪಾಟೀಲ್

0
Spread the love

ಬೆಂಗಳೂರು:- ಕಳೆದ ಕೆಲವು ದಿನಗಳ ಹಿಂದೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತಗಳ್ಳತನ ಆರೋಪ ಮಾಡಿದ್ದರು.

Advertisement

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಹಾಗೂ ಬಿಹಾರದಲ್ಲಿ ಮತಗಳ್ಳತನ ನಡೆದಿತ್ತು ಎಂದು ಇವಿಎಂ ಮೇಲೆ ಶಂಕೆ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ಮಾಡಿದ್ದರು. ಇದೆಲ್ಲದರ ಬೆಳವಣಿಗೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಎಸ್, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಖಾತೆ ಸಚಿವ ಹೆಚ್.ಕೆ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದೆ. ಈ ಕುರಿತು ಅನುಮೋದನೆ ನೀಡಲಾಗಿದೆ ಎಂದರು.

ಇತ್ತೀಚಿಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ. ಮತಗಳ್ಳತನ ಚರ್ಚೆ ನಡೆದಿದೆ. ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ ಎಂದು ಹೆಚ್ ಕೆ ಪಾಟೀಲ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here