ಚುನಾವಣೆಯಲ್ಲಿ ಮತಗಳ್ಳತನ: ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ – ಚಲುವರಾಯಸ್ವಾಮಿ!

0
Spread the love

ಮಂಡ್ಯ:- ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ ಬರುತ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಮತಗಳ್ಳತನವಾಗಿರುವ ಸಂಬಂಧ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿ, ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ನಡೆಸಲಾಗಿ ಸಾಬೀತಾದ ಕಾರಣದಿಂದ ಪ್ರತಿಭಟನೆಯ ಮೂಲಕ ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸಲಾಗುವುದು ಎಂದರು.

ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ಆಧಾರದ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ದೂರು ಸ್ವೀಕರಿಸದ ಕಾರಣ ಪ್ರತಿಭಟನೆಯ ಮೂಲಕ ಚುನಾವಣಾ ಆಯೋಗದ ವೈಫಲ್ಯ ಹಾಗೂ ಕೇಂದ್ರಾಡಳಿತದ ಬಿಜೆಪಿ ಚುನಾವಣಾ ಆಯೋಗದ ದುರುಪಯೋಗವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಆರ್‌ಸಿಬಿ ಕಾಲ್ತುಳಿತದ ಪ್ರಕರಣದ ಹಿನ್ನೆಲೆ ರ‍್ಯಾಲಿ ನಡೆಸಲು ಹೈಕೋರ್ಟ್ ನಿರ್ಬಂಧ ಹೇರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದೆ. ಬೆಂಗಳೂರಿನ ಅನಂತ್‌ರಾವ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೂ ಸಂಚಾರದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಸೇರಿ 5 ಸಾವಿರ ಮಂದಿ ಪಾಲ್ಗೊಳ್ಳಬೇಕಾಗಿದೆ. ಅಂದು ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲರೂ ಫ್ರೀಡಂ ಪಾರ್ಕ್ ಸೇರುವಂತೆ ಮನವಿ ಮಾಡಿದ ಅವರು, ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರು ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೈಚಳಕದ ಬಗ್ಗೆ,

ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಬಿಜೆಪಿ ಕೈಚಳಕ ತೋರಿರುವ ಅನುಮಾನವಿದ್ದು, ಎಲ್ಲದರ ಮಾಹಿತಿ ಹಂಚಿಕೊಳ್ಳಲಿದ್ದಾರೆ. 50ರಿಂದ 70 ಸಾವಿರ ಮಂದಿ ಭಾಗವಹಿಸುಲಿದ್ದಾರೆಂದು ಅಂದಾಜಿಸಲಾಗಿದ್ದು, 1 ಲಕ್ಷ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here