ಮತದಾನ ಮಾಡಿ, ಪ್ರಜಾಪ್ರಭುತ್ವ ಬಲಪಡಿಸಿ

0
sveep
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹ ಭಾಗಿತ್ವ ಸಮಿತಿ (ಸ್ವೀಪ್) ಹಾಗೂ ವಿವಿಧ ಇಲಾಖೆಯ ಸಹಕಾರದಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆಗೆ’ ಕಾರ್ಯಕ್ರಮವು ಭಾನುವಾರ ನಡೆಯಿತು.

Advertisement

ನಗರದ ಭೂಮರಡ್ಡಿ ವೃತ್ತದಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಹಾಗೂ ಜಿ.ಪಂ ಸಿಇಒ ಭರತ್.ಎಸ್ ಅವರು ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ಬಳಿಕ ಕೆ.ಎಚ್. ಪಾಟೀಲ ವೃತ್ತ, ಬಸವೇಶ್ವರ ವೃತ್ತ, ಟಾಂಗಾಕೂಟ ಮಾರ್ಗವಾಗಿ ವೀರನಾರಾಯಣ ದೇವಸ್ಥಾನದ ಮೂಲಕ ನಗರದ ಸರಕಾರಿ ಹೆಣ್ಣು ಮಕ್ಕಳ ಶಾಲೆಗೆ ತೆರಳಲಾಯಿತು.

ದಾರಿಯುದ್ದಕ್ಕೂ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಹಾಗೂ ಜಿ.ಪಂ ಸಿಇಒ ಭರತ್.ಎಸ್ ಸೇರಿದಂತೆ ನೂರಾರು ಜನರು ಕಾಲ್ನಡಿಗೆ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ನಂತರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಚುನಾವಣಾ ಧ್ವಜಾರೋಹಣ ನೆರವೇರಿಸಿದರು. ಯುವ ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಭಿನಂದನಾ ಪ್ರಮಾಣ ನೀಡಲಾಯಿತು. ಚುನಾವಣಾ ರಾಯಭಾರಿ ಪ್ರೇಮಾ ಹುಚ್ಚಣ್ಣವರ, ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಎ. ರಡ್ಡೇರ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ಶಾಲೆಯ ಮುಖ್ಯೋಪಾಧ್ಯಾಯ ಎಫ್.ಜೆ. ದಲಭಂಜನ್, ವಿವಿಧ ಇಲಾಖೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here