ಮತದಾನ ಮಾಡಿ, ಸಂವಿಧಾನ ಬಲಪಡಿಸಿ

0
dc jatha
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ ಚುನಾವಣೆಯಲ್ಲಿ ಬೆಟಗೇರಿಯ ಭಾಗದಲ್ಲಿ ಕಡಿಮೆ ಮತದಾನ ವಾಗಿದ್ದು, ಈ ಪ್ರದೇಶಗಳಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ಮತದಾನವಾಗಬೇಕು. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ತಮ್ಮ ಮತಗಟ್ಟೆ ಸಂಖ್ಯೆ, ಮತಗಟ್ಟೆ ಭಾಗದ ಕ್ರಮ ಸಂಖ್ಯೆ ಮುಂತಾದ ಮಾಹಿತಿ ತಿಳಿದುಕೊಂಡು ಕಡ್ಡಾಯವಾಗಿ ಮತದಾನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಕೋರಿದರು.

Advertisement

ಭಾರತ ಚುನಾವಣಾ ಅಯೋಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹ ಭಾಗಿತ್ವ ಸಮಿತಿ (ಸ್ವೀಪ್), ಹಿಂದುಳಿದ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಬೆಟಗೇರಿಯ ಅಂಬಾಭವಾನಿ ವೃತ್ತದಲ್ಲಿ ನಡೆದ `ನಮ್ಮ ನಡೆ ಮತಗಟ್ಟೆ ಕಡೆಗೆ’ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿ.ಪಂ ಸಿಇಓ ಭರತ್.ಎಸ್ ಅವರೊಂದಿಗೆ ಚಾಲನೆ ನೀಡಿ ಅವರು ಮಾತನಾಡಿದರು.

dc jatha

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ ಮಾತನಾಡಿ, ಮತದಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು. ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಮೂಲಕ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜಾಥಾ ಕಾರ್ಯಕ್ರಮವು ಗದಗ ಬೆಟಗೇರಿಯ ಅಂಬಾಭವಾನಿ ವೃತ್ತದಿಂದ ಕುರಟ್ಟಿಪೇಟೆ, ಬಸ್ ನಿಲ್ದಾಣ, ಮಂಜುನಾಥ ನಗರ, ಹುಯಿಲಗೋಳ ರಸ್ತೆ ಮಾರ್ಗವಾಗಿ ತಾರಾಲಯವನ್ನು ತಲುಪಿತು. ಜಾಥಾದಲ್ಲಿ ಬೈಕ್ ರ‍್ಯಾಲಿ, ನಾನಾ ಕಲಾ ತಂಡಗಳಿಂದ ಕಲಾ ಪ್ರದರ್ಶನ, ವಿದ್ಯಾರ್ಥಿಗಳ ವೇಷ-ಭೂಷಣಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.

ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ವಸತಿ ನಿಲಯದ ವಿದ್ಯಾರ್ಥಿಗಳು, ಕಲಾ ತಂಡಗಳ ಸದಸ್ಯರು ಇದ್ದರು.

ಜಿ.ಪಂ ಸಿಇಒ ಭರತ್.ಎಸ್ ಮಾತನಾಡಿ, ಮೇ.7ರಂದು ಮತದಾನ ನಡೆಯಲಿದ್ದು, ಊರ ಜಾತ್ರೆಯ ರೀತಿ ಕುಟುಂಬ, ಸ್ನೇಹಿತರೊಂದಿಗೆ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡುವಂತಾಗಬೇಕು. ಪ್ರತಿ ಮತವೂ ಸಹ ಅಮೂಲ್ಯವಾಗಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here